ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬದ 25 ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಚಾಮರಾಜನಗರ, ಏಪ್ರಿಲ್ 21: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ 25 ಮಂದಿಗೆ ಇಂದು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.

ಗುಂಡ್ಲುಪೇಟೆ ಪಟ್ಟಣದಲ್ಲಿ ಇಂದು ಗುಂಡ್ಲುಪೇಟೆ ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಕೋವಿಡ್ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟಿದ್ದ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿತ್ತು. ಮೊದಲಿಗೆ ತಾತ್ಕಾಲಿಕವಾಗಿ ಉದ್ಯೋಗ ನೀಡಲಾಗಿತ್ತು. ಸಂತ್ರಸ್ತರ ಕುಟುಂಬದ ಸದಸ್ಯರ ಖಾಯಂ ಉದ್ಯೋಗ ನೀಡಬೇಕೆಂಬ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಇಂದು 25 ಜನರಿಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಖಾಯಂ ಉದ್ಯೋಗ ನೇಮಕಾತಿ ಪತ್ರಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಕ್ಸಿಜನ್ ದುರಂತದ ಸಂದರ್ಭದಲ್ಲಿ ಮೃತರ ಕುಟುಂಬವನ್ನು ಭೇಟಿ ಮಾಡಿ ಆತ್ಮಸ್ತೈರ್ಯ ತುಂಬಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಇಂದು 25 ಸಂತ್ರಸ್ತ ಕುಟುಂಬ ಸದಸ್ಯರಿಗೆ ಉದ್ಯೋಗ ಸಿಕ್ಕಿದೆ. ನುಡಿದಂತೆ ನಡೆದಿದ್ದು, ನಮಗೆ ನೆಮ್ಮದಿ ಸಾರ್ಥಕತೆಯ ಭಾವ ಬಂದಿದೆ. ಈ ಕಾರ್ಯಕ್ಕೆ ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಚಿವರಾದ ಶರಣ ಪ್ರಕಾಶ ಪಾಟೀಲ್ ಹಾಗೂ ಅಧಿಕಾರಿಗಳಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

About Author

Leave a Reply

Your email address will not be published. Required fields are marked *