ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ!
ಬೆಂಗಳೂರು : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.