ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಸರ್ಕಾರದಿಂದ‌ ಗ್ರೀನ್ ಸಿಗ್ನಲ್

1 min read

ಬೆಂಗಳೂರು, ಸೆ.24-ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಅಕ್ಟೋಬರ್ 1 ರಿಂದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸಿನಿಪ್ರಿಯರಿಗೆ ಹಾಗೂ ಚಿತ್ರರಂಗದವರಿಗೆ ಸಂತೋಷವಾಗಿದೆ.
ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೊರೋನಾ ನಿಯಂತ್ರಣ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,
ಕೋವಿಡ್ ಎಕ್ಸ್‌ಪರ್ಟ್ ಕಮಿಟಿ ಜೊತೆ ಸಭೆ ಮಾಡಿದ್ವಿ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಸರಾಸರಿ 0.66 ಇದೆ. ನಾಲ್ಕೈದು ಜಿಲ್ಲೆ ಬಿಟ್ಟರೆ, ಮಿಕ್ಕೆಲ್ಲಾ ಜಿಲ್ಲೆಗಳು ಇದೇ ಸರಾಸರಿಯಲ್ಲಿದೆ ಮತ್ತು ಕೋವಿಡ್ ನಿಯಂತ್ರಣದಲ್ಲಿದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ‌‌ ಮಾತ್ರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
ಕೋವಿಡ್ ಪಾಸಿಟಿವಿಟಿ ರೇಟ್ ಶೇ.1 ಕ್ಕಿಂತ ಹೆಚ್ಚಿರುವ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗುವುದು. ಕೋವಿಡ್ ಪಾಸಿಟಿವಿಟಿ ರೇಟ್ ಶೇ.2 ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು ಎಂದರು.
ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಚಿತ್ರಮಂದಿರಗಳಲ್ಲಿ ಪ್ರವೇಶ. ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಅ.3 ರಿಂದ ಪಬ್ ಗಳಲ್ಲೂ ನಿರ್ಬಂಧ ತೆರವು. ಮಾಡಲಾಗುತ್ತದೆ. ನೈಟ್ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರಲಿದೆ ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದರು.
ಇನ್ನು ಸಿನಿಮಾ ಥಿಯೇಟರ್ ಹಾಗೂ ಪಬ್ ಗಳ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ ಎಂದು ತಿಳಿಸಿದರು.
ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡುವಂತೆ ಇತ್ತೀಚೆಗಷ್ಟೇ ನಿರ್ಮಾಪಕರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದೀಗ ಕನ್ನಡ ಚಿತ್ರರಂಗದವರ ಬೇಡಿಕೆ ಈಡೇರಿದೆ. ಥಿಯೇಟರ್‌ಗಳಲ್ಲಿ ಹೌಸ್‌ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿರುವುದರಿಂದ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ.

About Author

Leave a Reply

Your email address will not be published. Required fields are marked *