ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿ ಸದಸ್ಯರಾಗಿ ಮೈಸೂರಿನ ಪತ್ರಕರ್ತ ಸಿ.ಮಹೇಶ್ವರನ್!
ಮೈಸೂರು: ಪ್ರತಿ ವರ್ಷ ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ದಿನದಂದು ನೀಡಲಾಗುತ್ತಿರುವ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರನ್ನು ಗುರುತಿಸಿ ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಅದರಂತೆ ಮೈಸೂರು ಜಿಲ್ಲೆಯ ಪ್ರತಿನಿಧಿಯಾಗಿ ಹಿರಿಯ ಪತ್ರಕರ್ತರೂ, ಸಾಧ್ವಿ ಪತ್ರಿಕೆ ಸಂಪಾದಕರೂ ಆದ ಸಿ.ಮಹೇಶ್ವರನ್ ನೇಮಕಗೊಂಡಿದ್ದಾರೆ.
2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ 30 ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ.