ಮೈಸೂರು : ಆಟೋ ಮೇಲೆ ಉರುಳಿ ಬಿದ್ದ ಮರ- ಸ್ಥಳದಲ್ಲೇ ಆಟೋ ಚಾಲಕ ಸಾವು!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಆಟೋ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ಫೈವ್‌ಲೈಟ್ ಸರ್ಕಲ್ ನಲ್ಲಿ ನಡೆದಿದೆ. ಲಷ್ಕರ್ ಮೊಹಲ್ಲಾದ ಫೈವ್ ಲೈಟ್ ವೃತ್ತದ ಬಳಿ ಮಳೆ ಅರ್ಭಟಕ್ಕೆ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ.

ಆಟೋ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪ್ಯಾಸೆಂಜರ್ ಆಟೋ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಎನ್.ಆರ್.ಠಾಣೆ ಪೊಲೀಸರ ಭೇಟಿ ಕೊಟ್ಟು ಮರ ತೆರವು ಮಾಡಿಸಲು ಮುಂದಾಗಿದ್ದಾರೆ.