ಮೈಸೂರು ಡಿಸಿ ಕಚೇರಿ ಬಳಿ ಊಟ- ನೀರಿಗಾಗಿ ವಿದ್ಯಾರ್ಥಿನಿಯರ ಪ್ರೊಟೆಸ್ಟ್!
ಮೈಸೂರಿನ ಹಾಸ್ಟೆಲ್ ನಲ್ಲಿ ಸಮರ್ಪಕ ಊಟ ಮತ್ತು ನೀರು ಪೂರೈಸುವಂತೆ ಒತ್ತಾಯಿಸಿ ಕಾಲೇಜು ವಿದ್ಯಾರ್ಥಿನಿಯರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಡಿಸಿ ಕಚೇರಿ ವಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಅಕ್ಟೋಬರ್ 18ರಿಂದ ವಸತಿ ನಿಲಯ ಆರಂಭವಾಗಿದ್ದು, ಅಂದಿನಿಂದಲೂ ಊಟ ಹಾಗೂ ನೀರಿನ ವ್ಯವಸ್ಥೆಯೇ ಇಲ್ಲ. ಪರರಿಣಾಮ ವಸತಿ ನಿಲಯದ ವಿದ್ಯಾರ್ಥಿನಿಯರು ಹೊರಗಿನಿಂದ ಊಟ ತಂದು ಸೇವಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಇಂದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಪ್ರತಿಭಟನೆ ನಡೆಸುತ್ತಿದ್ದೇವೆ ಅಂತಾರೆ ವಿದ್ಯಾರ್ಥಿನಿಯರು.