ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ರಾಜ್ಯ ಸರ್ಕಾರ ಸಂತಾಪ: ಎರಡು ದಿನ ಶೋಕಾಚರಣೆ

1 min read

ಬೆಂಗಳೂರು,ಫೆ.6-ಮೇರು ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸಂತಾಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಲತಾ ಅವರ ಸ್ಮರಣಾರ್ಥ ಇಂದು ಮತ್ತು ನಾಳೆ (ಫೆ.7) ರಾಜ್ಯದಾದ್ಯಂತ ಶೋಕವನ್ನು ಆಚರಿಸಲಾಗುವುದು ಅಧಿಸೂಚನೆ ಹೊರಡಿಸಲಾಗಿದೆ.
ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ‌.

About Author

Leave a Reply

Your email address will not be published. Required fields are marked *