ಹಿಜಾಬ್ v/s ಕೇಸರಿ ವಿವಾದ: ತ್ರಿ ಸದಸ್ಯ ಪೀಠದಿಂದ ಮಧ್ಯಂತರ ಆದೇಶ; ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಬಳಸುವಂತಿಲ್ಲ
ಬೆಂಗಳೂರು,ಫೆ.10-ರಾಜ್ಯದಲ್ಲಿ ಭುಗಿಲೆದಿದ್ದ ಹಿಜಾಬ್-ಕೇಸರಿ ಶಾಲು ವಿವಾದದಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಿದೆ. ವಿವಾದದ ಕುರಿತು ಹೈ ಕೋರ್ಟ್ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದೆ.
ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳಾದ ಹಿಜಾಬ್-ಶಾಲು ಧರಿಸುವಂತಿಲ್ಲ ಎಂದಿದೆ. ಹಾಗೆಯೇ ಮುಂದಿನ ವಿಚಾರಣೆಯನ್ನು ಸೋಮವಾರ (ಫೆ.14)ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು’ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.