ಹಿಜಾಬ್-ಕೇಸರಿ ಶಾಲು ವಿವಾದ: ಫೆ.28 ರವರೆಗೆ ನಗರದ ಶಾಲಾ-ಕಾಲೇಜುಗಳ ಸುತ್ತ 144 ಸೆಕ್ಷನ್ ಜಾರಿ

1 min read

ಮೈಸೂರು,ಫೆ.15-ಹಿಜಾಬ್-ಕೇಸರಿ ಶಾಲು ವಿವಾದವಾಗಿ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಫೆ. 28 ರವರೆಗೆ ನಗರದಾದ್ಯಂತ ಶಾಲಾ ಕಾಲೇಜುಗಳ ಸುತ್ತಲೂ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.


1 ರಿಂದ 10ನೇ ತರಗತಿಯವರೆಗೆ ಶಾಲೆಗಳಿಗೆ ಹೋಗುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಂಜಾಗ್ರತ ಕ್ರಮವಾಗಿ ಫೆ.28 ರವರೆಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳ ಆವರಣದ ಸುತ್ತಲೂ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ಗುಂಪು ಸೇರುವುದು, ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದಾರೆ. ಜೊತೆಗೆ ಶಾಲಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಯಾವುದೇ ಅನಧಿಕೃತ ವ್ಯಕ್ತಿಗಳು ಸೇರುವುದನ್ನು ನಿಷೇಧಿಸಲಾಗಿದೆ.


ಈ ಘಟನೆ ಉಲ್ಲಂಘಿಸಿದ್ದಲ್ಲಿ ಆ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆದೇಶಿಸಿದ್ದಾರೆ.

About Author

Leave a Reply

Your email address will not be published. Required fields are marked *