ಈ ಬಾರಿಯ ಬಜೆಟ್ ಕೇಸರಿ ಬಜೆಟ್: ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವ್ಯಂಗ್ಯ…
ಮೈಸೂರು :
“ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕೇವಲ 27% ಮಾತ್ರ ಜನ ಸಾಮಾನ್ಯರಿಗೆ ತಲುಪುತ್ತದೆ” ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ಬಾರಿಯ ರಾಜ್ಯ ಬಜೆಟ್ ನ ಗಾತ್ರ ದೊಡ್ಡದಾಗಿದ್ದರೂ ಕೂಡ ಜನ ಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಿಲ್ಲ. ಸಾಲದ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದನಂತರ ಸಾಲದ ಪ್ರಮಾಣ ಏರಿಕೆಯಾಗಿದೆ.” ಎಂದು ಆರೋಪಿಸಿದ್ದಾರೆ.
“ಈ ಬಾರಿಯ ಬಜೆಟ್ ಕೇಸರಿ ಬಜೆಟ್ ಆಗಿದೆ. ಈ ಬಾರಿಯ ಬಜೆಟ್ ಜನ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ, ಕೈಗಾರಿಕಾ ವಿರೋಧಿ ಬಜೆಟ್ ಆಗಿದೆ.” ಎಂದು ಹೇಳಿಕೆ ನೀಡಿದ್ದಾರೆ.