ಮಳೆ ಹಾನಿ ಪ್ರದೇಶಗಳಿಗೆ ಡಿಸಿ ಭೇಟಿ- ಪರಿಶೀಲನೆ!
1 min read
ಮೈಸೂರಿನಲ್ಲಿ ನಿರಂತರ ಮಳೆಯಿಂದಾಗಿ ಕಂಗೆಟ್ಟ ಜನರಿಗೆ ಇಂದು ಮಳೆರಾಯ ಕೊಂಚ ಬಿಡುವು ನೀಡಿದ್ದಾನೆ. ಇದರ ಮಧ್ಯೆ ಮಳೆಯಿಂದಾದ ಹಾನಿ ವೀಕ್ಷಣೆಗಾಗಿ ಮೈಸೂರು ಜಿಲ್ಲಾಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಮೊದಲಿಗೆ ಆನಂದನಗರ ಹಾಗೂ ಶಾರದ ದೇವಿನಗರಕ್ಕೆ ಭೇಟಿ ಕೊಟ್ಟಿದ್ದು ಇವರಿಗೆ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ಅವರು ಸಹ ಸಾಥ್ ನೀಡಿದರು. ಅಲ್ಲದೆ ಎಲ್ಲೆಲ್ಲಿ ಸಮಸ್ಯೆ ಆಗಿದೆ. ಅಲ್ಲಿ ತ್ವರಿತವಾಗಿ ಆಗಬೇಕಾದ ಕೆಲಸಗಳ ಬಗ್ಗೆ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.