ನಟ ಪುನೀತ್ ರಾಜ್‍ಕುಮಾರ್ (46) ಇನ್ನಿಲ್ಲ
ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ನಟ ಪುನೀತ್ ರಾಜ್‍ಕುಮಾರ್ (46) ಕೊನೆಯುಸಿರೆಳೆದಿದ್ದಾರೆ.

ಕನ್ನಡದ ಫ್ಯಾಮಿಲಿ ಹಾಗೂ ಯೂತ್ ಎಂಟರ್‌ಟೈನ್‌ಮೆಂಟ್ ಚಿತ್ರಗಳಿಗೆ ಆದ್ಯತೆ ನೀಡಿ ಹಿಟ್ ಚಿತ್ರಗಳನ್ನ ನೀಡಿದ್ದ ಪುನೀತ್ ಅವರಿಗೆ ಹೃದಯಾಘಾತವಾಗಿತ್ತು. ಚಿಕಿತ್ಸೆಗೆಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ವೈದ್ಯರ ಸಲಹೆ ಮೇರೆಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಕ್ರಂ ಆಸ್ಪತ್ರೆಗೆ ಬರುವ ಮುನ್ನವೇ ಪುನೀತ್ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ. ಸದ್ಯ ಅವರ ಅಂತಿಮ ದರ್ಶನಕ್ಕೆ ಸರ್ಕಾರದಿಂದ ಸಿದ್ದತೆಗಳು ನಡೆಯುತ್ತಿದ್ದು, ಅಹಿತಕರ ಘಟನೆ ಆಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶೋಕಸಾಗರದಲ್ಲಿ ಇಡೀ ಭಾರತೀಯ ಚಿತ್ರರಂಗ ಮುಳುಗಿದ್ದು ಸ್ಯಾಂಡಲ್‌ವುಡ್ ನಟ ನಟಿಯರು ಕಣ್ಣೀರಾಗಿದ್ದಾರೆ. ಇತ್ತ ನೆಚ್ಚಿನ ನಟನನ್ನ ಕಳೆದುಕೊಂಡ ಅಭಿಮಾನಿಗಳ ರೋಧನೆ ಮುಗಿಲು ಮುಟ್ಟಿದೆ.