ಜಿ.ಟಿ.ದೇವೇಗೌಡರ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ!
ಮೈಸೂರು : ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇಂದು ಮೈಸೂರಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಜಿಟಿಡಿ ಅವರ ಮೊಮ್ಮಗಳ ನಿಧನದಿಂದ ದುಃಖತಪ್ತರಾಗಿರುವ ಜಿ.ಟಿ.ದೇವೇಗೌಡ ಹಾಗೂ ಕುಟುಂಬ ವರ್ಗದವರಿಗೆ ಇದೇವೇಳೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಿರಂಜನ್, ಮಹೇಶ್, ಮಾಜಿ ಸಚಿವ ವಿಜಯ್ ಶಂಕರ್, ಮೂಡಾ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.