ಚಾಮುಂಡಿಬೆಟ್ಟ ಭೂಕುಸಿತದ ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
1 min read
ಮೈಸೂರು: ಚಾಮುಂಡಿಬೆಟ್ಟ ಭೂಕುಸಿತದ ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸಹಕಾರ ಸಚಿವರು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದ್ದಾರೆ.

ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ಥಿ ಕಾರ್ಯವನ್ನು ಕೈಗೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದ್ದಾರೆ.
