ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೊಸಪೇಟೆ,ಅ.2-ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಇಂದಿನಿಂದ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರ್ಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು.
ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳ ಕಲರವ , ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಈ ಸಂದರ್ಭದಲ್ಲಿ ಜಿಲ್ಲೆಯ 56 ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ನೆರವೇರಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಆನಂದ್ ಸಿಂಗ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಸಿ. ಸಿ.ಪಾಟೀಲ್, ಬೈರತಿ ಬಸವರಾಜ ಭಾಗಿ, ಬಿ. ಶ್ರೀರಾಮುಲು, ಸುನಿಲ್ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.