ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಆಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಹಾನಗಲ್,ಅ.22-ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಹಾನಗಲ್, ಸಿಂದಗಿ ಉಪಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಸ್ವೈ ಅವರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಆಗುತ್ತದೆ. ಈ ಬಗ್ಗೆ ಕಾಂಗ್ರೆಸ್ ಸ್ನೇಹಿತರೇ ನಿಮ್ಮ ಮೊಮ್ಮಕ್ಕಳಿಗೂ ಈಗಲೇ ತಿಳಿಸಿಬಿಡಿ. ಅಲ್ಲದೇ ಬಿಜೆಪಿ ಪಕ್ಷ ಸೇರುವಂತೆ ತಿಳಿಸಿ ಬಿಡಿ ಎಂದು ಲೇವಡಿ ಮಾಡಿದರು.
ಹಾಗೆಯೇ ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಂಡಾಡುತ್ತಿದರೇ ಇತ್ತ ವಿರೋಧ ಪಕ್ಷ ಮಾತ್ರ ಅವರನ್ನು ವಿರೋಧಿಸುತ್ತಿದೆ. ಮೋದಿಯವರನ್ನು ವಿರೋಧಿಸುವವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.