2025ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ
1 min read
ಮೈಸೂರು: 2025ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಪ್ರಾರಂಬಿಸಿದ್ದು, ಪಶುವೈದ್ಯಾಧಿಕಾರಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದೊಂದಿಗೆ ವಿವಿಧ ಆನೆಗಳ ಶಿಬಿರಗಳಿಗೆ ಬೇಟಿ ನೀಡಿ ಆನೆಗಳ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿರುತ್ತದೆ.
ಆನೆ ಶಿಬಿರದಲ್ಲಿರುವ ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್ ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿರುತ್ತದೆ. ಲ್ಯಾಬ್‌ನಿಂದ ಪರೀಕ್ಷಾ ವರದಿ ಬಂದ ನಂತರ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು.
ಸರ್ಕಾರದಿಂದ ಅನುಮೋದನೆಗೊಂಡ ಆನೆಗಳ ಆಯ್ಕೆ ಪಟ್ಟಿಯನ್ನು, ತದನಂತರ ಮಾನ್ಯ ಅರಣ್ಯ ಸಚಿವರು, ಅರಣ್ಯ ಇಲಾಖೆಯಿಂದ ಜಂಬೂ ಸವಾರಿಯಲ್ಲಿ ಭಾಗವಹಿಸುವ ಇಲಾಖಾ ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸುವರು.
ಪ್ರಸ್ತುತ ಆನೆಗಳ ಆರೋಗ್ಯ ತಪಾಸಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ-20ರ ನಂತರ ಆನೆಗಳ ಆಯ್ಕೆಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು.