ದಸರಾ ಹಿನ್ನೆಲೆ: ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ
ಮೈಸೂರು,ಸೆ.28-ದಸರಾ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಮೈಸೂರು ಪ್ರಮುಖ ಪ್ರವಾಸಿ ತಾಣವಾಗಿದ್ದು, ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವಂತೆ ಹಾಗೂ ಸೂಕ್ತ ಭದ್ರತೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ವಿದೇಶಿಗರು ಮೈಸೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.