ಫೆ.19 ರಂದು ಕರ್ಪೂರವಳ್ಳಿ ಗ್ರಾಮದಲ್ಲಿ ಡಿಸಿ ವಾಸ್ತವ್ಯ
1 min read
ಮೈಸೂರು,ಫೆ.15-ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಫೆ.19 ರಂದು ಮೈಸೂರಿನ ಸಾಲಿಗ್ರಾಮ ತಾಲೂಕು ಕರ್ಪೂರವಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಪಹಣಿ ದಾಖಲೆಗಳ ತಿದ್ದುಪಡಿ, ಆಹಾರ ಪಡಿತರ ಚೀಟಿ, ಸರ್ಕಾರಿ ಭೂಮಿ ಒತ್ತುವರಿ ವಿಚಾರ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಸಮಸ್ಯೆ ಬಗೆಹರಿಸಲಾಗುವುದು.
ಹೀಗಾಗಿ ಗ್ರಾಮಸ್ಥರು ಸಮಸ್ಯೆಗಳ ಬಗ್ಗೆ ಮುಂಚಿತವಾಗಿ ಸಂಬಂಧಪಟ್ಟ ನಾಡಾ ಕಚೇರಿ, ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೊತೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿರುವ ತಾಲೂಕನ್ನು ಹೊರತುಪಡಿಸಿ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರು ಅವರ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ವಾಸ್ತವ್ಯ ಹೊಡಲಿದ್ದಾರೆ. ಆ ಗ್ರಾಮಗಳ ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಮನವಿಗಳನ್ನು ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.