ಡಿಕೆ ಶಿವಕುಮಾರ್ ಸಿಎಂ ಆಗಲಿ: ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ಅಭಿಮಾನಿಗಳ ವಿಶೇಷ ಸೇವೆ

1 min read

ಮೈಸೂರು: ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಕಾಣಬೇಕೆಂಬ ಹಾರೈಸಿ, ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ವಿಶೇಷ ಸೇವೆ ಸಲ್ಲಿಸಲಾಯಿತು. ಅಭಿಮಾನಿಗಳು ಡಿಕೆ ಶಿವಕುಮಾರ್ ಅವರ ಭಾವಚಿತ್ರವನ್ನು ರಥದ ಮುಂಭಾಗದಲ್ಲಿ ಇರಿಸಿ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ. ಶ್ರೀನಾಥ್ ಬಾಬು ಅವರು, “ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ವೈಖರಿ, ಅಭಿವೃದ್ಧಿ ದೃಷ್ಟಿಕೋನ ಮತ್ತು ಜನಪರ ಕೆಲಸಗಳು ಅವರನ್ನು ಪರಿಣಾಮಕಾರಿ ನಾಯಕನನ್ನಾಗಿ ತೋರಿಸಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಗೆಲುವಿನಲ್ಲಿ ಅವರ ಪರಿಶ್ರಮ ಮಹತ್ತರ ಪಾತ್ರ ವಹಿಸಿದೆ.

ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಸಿಎಂ ಬದಲಾವಣೆ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿಯಾಗಿ ನೇಮಿಸಬೇಕು. ಸಿದ್ದರಾಮಯ್ಯ ಅವರು ಸರ್ಕಾರವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ, ಆದರೆ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಅವಕಾಶ ನೀಡಬೇಕೆಂಬುದು ನಮ್ಮ ಮನವಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ. ಶ್ರೀನಾಥ್ ಬಾಬು, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿ. ರಾಘವೇಂದ್ರ, ಹರೀಶ್ ಗೌಡ, ಎಸ್.ಎನ್. ರಾಜೇಶ್, ಶಶಾಂಕ್ ಗೌಡ, ಚಂದ್ರು, ಕಿರಣ್, ಪ್ರಸನ್ನ ಕುಮಾರ್ (ಅಪ್ಪಿ), ದಿನೇಶ್, ವಿನೋದ್, ಮಾತ್ಯುಸ್, ಹರೀಶ್ ನಾಯ್ಡು, ಶೈಲಾ, ಶೋಭಾ ರಾವ್, ಸುಜಾತ ಭಟ್, ಆಶಾ, ಸುಂದರಿ, ರವಿ ಕಲಾ, ಸಹಿಗೀತಾ, ದೀಪ ಹಾಗೂ ಹಲವಾರು ಅಭಿಮಾನಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *