ನವೆಂಬರ್ 18 &19ಕ್ಕೆ ಮತದಾರರ ವಿಶೇಷ ನೋಂದಣಿ ಅಭಿಯಾನ.!
ಬೆಂಗಳೂರು ಗ್ರಾಮಾಂತರ ಜಿಲ್ಲೆ: ನವೆಂಬರ್ 18,19 ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ.!
ಬೆಂಗಳೂರು ಗ್ರಾಮಾಂತರ :- ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ನವೆಂಬರ್ 18 ಹಾಗೂ ನವೆಂಬರ್ 19ರಂದು ವಿಶೇಷ ಅಭಿಯಾನ ದಿನವನ್ನಾಗಿ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಜರಿದ್ದು ಅರ್ಜಿಗಳನ್ನು ಸ್ವೀಕರಿಸುತ್ತಾರೆಂದು ಡಿಸಿ ಶಿವಶಂಕರ್ ಅವ್ರು ತಿಳಿಸಿದ್ದಾರೆ.
ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ, ಈಗಾಗಲೇ ಮತದಾರರ ಪಟ್ಟಿಯಲ್ಲಿರುವವರ ವಿಳಾಸ ಬದಲಾವಣೆ, ತಿದ್ದುಪಡಿಗೆ ಅವಕಾಶವಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ್ ಎನ್. ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಅಕ್ಟೋಬರ್ 27 ರಿಂದ ಡಿಸೆಂಬರ್ 9 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಹೊಸದಾಗಿ ಯುವಕರು ಯುವತಿಯರು ಮತ್ತು ಸಾರ್ವಜನಿಕರ ಹೆಸರು ಸೇರ್ಪಡೆ ಮಾಡಿಕೊಳ್ಳಲು ನಮೂನೆ 6 ರನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಹೆಸರು ಕಡಿಮೆಗೊಳಿಸಲು ನಮೂನೆ 7, ಹೆಸರು ಇತ್ಯಾದಿ ತಿದ್ದುಪಡಿ ಮತ್ತು ಹೆಸರು ವರ್ಗಾವಣೆ ಬಯಸಿದ್ದಲ್ಲಿ ನಮೂನೆ ಎಂಟರಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಭರ್ತಿ ಮಾಡಿ ಸಂಬಂಧ ಪಟ್ಟ ಮತಗಟ್ಟೆ ಅಧಿಕಾರಿ (ಬಿ ಎಲ್ ಓ)ರವರಿಗೆ ಸಲ್ಲಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.