ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ!
ಮೈಸೂರು : SSLC ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ. ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿಯಾಗಿದ್ದು, ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿರುವ ವಿದ್ಯಾರ್ಥಿನಿ ಶವ ಇದ್ದು, ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.