ರಾಜ್ಯದಲ್ಲಿ ನಿರಂತರ ಮಳೆ ಹಿನ್ನಲೆ- ಶಾಲೆಗಳಿಗೆ ರಜೆ ಘೋಷಣೆ!
ರಾಜ್ಯದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ ಆದೇಶ ಹೊಡಿಸಿದೆ. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಕ್ಕಳು ಶಾಲೆಗೆ ಬಂದು ಹೋಗಲು ಸಾಕಷ್ಟು ಸಮಸ್ಯೆ ಉಂಟಾಗಿರುವ ಕಾರಣ ಆಯಾ ಜಿಲ್ಲೆಯ ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ಇದು 1 ರಿಂದ 10ನೇ ತರಗತಿವರೆಗು ಅನ್ವಯವಾಗಲಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಶಾಲ್ ಆರ್ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮಳೆಯ ಕಾರಣ ರಜೆ ನೀಡಲಾದ ಈ ಸಂದರ್ಭದಲ್ಲಿನ ಪಾಠ ಪ್ರವಚನ ಮುಂದಿನ ದಿನಗಳಲ್ಲಿ ಸರಿದೂಗಿಸಲು ಸಹ ಸೂಚಿಸಲಾಗಿದೆ.