ಹಿಜಾಬ್ v/s ಕೇಸರಿ ವಿವಾದ: ಪರ-ವಿರೋಧದ ಪ್ರತಿಭಟನೆಗೆ ಅವಕಾಶವಿಲ್ಲ; ನಗರದಲ್ಲಿ ನಾಳೆ ನಿಷೇಧಾಜ್ಞೆ ಜಾರಿ
1 min read
ಮೈಸೂರು,ಫೆ.10-ಹಿಜಾಬ್ v/s ಕೇಸರಿ ಶಾಲು ವಿವಾದದ ಕುರಿತಾಗಿ ಮೈಸೂರಿನಲ್ಲಿ ಪರ-ವಿರೋಧದ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಶಾಂತಿ ಮತ್ತು ಸುವವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಸಿಆರ್ ಪಿಸಿ ಸೆಕ್ಷನ್ 144 ರನ್ವಯ ನಾಳೆ(ಫೆ.11) ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಎಲ್ಲ ರೀತಿಯ ಪ್ರತಿಭಟನೆ ಹಾಗೂ ಮೆರವಣಿಗೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ, ಮೆರೆವಣಿಗೆಯನ್ನು ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.