ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 17ನೆ ವಾರ್ಷಿಕ ಘಟಿಕೋತ್ಸವ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹದಿನೇಳನೆ ವಾರ್ಷಿಕ ಘಟಿಕೋತ್ಸವ ಸಮಾರಂಭವು ಇಂದು ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವಾನ್ವಿತ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಉಪಾಧ್ಯಕ್ಷ ಈ.ಎಸ್.ಚಕ್ರವರ್ತಿ, ವಿಆರ್ ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸಂಕೇಶ್ವರ್ ಇವರುಗಳಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿದ್ದರು.
ಕರಾಮುವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಎ.ಬಿ.ಬಸವರಾಜ್, ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.