ಮೈಸೂರು ದಸರಾ 2025: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಅಧಿಕೃತ ಆಹ್ವಾನ
1 min read
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಇಂದು ವಿಧಾನಸೌಧದ ಸಚಿವರ ಕಚೇರಿಯಲ್ಲಿ ಅಧಿಕೃತ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ದಸರಾ ವಿಶೇಷಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಉಪಸ್ಥಿತರಿದ್ದರು.