ಮೈಸೂರಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಶಕ್ತಿ ಪ್ರದರ್ಶನ.!
1 min read
*ಸರ್ಕಾರದ ಸಾಧನಾ ಸಮಾವೇಶ*
*2,578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ*
ಮೈಸೂರು : ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶವನ್ನು ದೀಪ ಬೆಳಗಿಸುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ 2,578.03 ಕೋಟಿ ವೆಚ್ಚದ ಕಾಮಗಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್ ಹೆಚ್.ಸಿ ಮಹದೇವಪ್ಪ, ಕೆ ವೆಂಕಟೇಶ್, ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಹಾಗೂ ಶಾಸಕರು ಎಂಎಲ್ ಸಿಗಳು ಉಪಸ್ಥಿತರಿದ್ದರು.