ಮೈಸೂರಿನಲ್ಲಿ ಓಮಿಕ್ರಾನ್ ವೈರಸ್ ಬಗ್ಗೆ ಕಟ್ಟುನಿಟ್ಟಿನ ಕ್ರಮ- ಡಿಸಿ ಬಗಾದಿ!
1 min read
ಮೈಸೂರು : ರಾಜ್ಯದಲ್ಲಿ ಒಮಿಕ್ರಾನ್ ಆತಂಕ ಹಿನ್ನೆಲೆ ಮೈಸೂರಿನಲ್ಲು ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಸೂಚನೆ ನೀಡಿದ್ದಾರೆ. ಇಂದು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಬಗಾದಿ ಗೌತಮ್, ಕೊರೊನಾ ತಡೆಗಟ್ಟಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ರು. ಇನ್ನು ಇದೇವೇಳೆ ಶಾಲಾ ಕಾಲೇಜುಗಳು, ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಬೇಕು.

ಪೋಷಕರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಸಹ ಸೂಚನೆ ನೀಡಬೇಕು ಎಂದ್ರು. ಅಲ್ಲದೆ ವ್ಯಾಕ್ಸಿನ್ ಹಾಕಿಸಿಕೊಳ್ಳದ ಪೋಷಕರ ಮಕ್ಕಳು ಆನ್ ಲೈನ್ ಕ್ಲಾಸ್ ಗೆ ಹಾಜರಾಗಬಹುದು. ಆದರೆ ವ್ಯಾಕ್ಸಿನ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಸೂಚನೆ ನೀಡಿ, ಮಾಲ್ ಥಿಯೆಟರ್ ಬಗ್ಗೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ರು. ಈ ವೇಳೆ ಎಲ್ಲಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.