ಬೆಂಗಳೂರಿಗೂ ‘ಒಮಿಕ್ರಾನ್’ ವೈರಸ್ ಎಂಟ್ರಿ ಶಂಕೆ!?
1 min read
ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ‘ಒಮಿಕ್ರಾನ್’ ರೂಪಾಂತರಿ ವೈರಸ್ ಎಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ನ.1 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ಸೋಂಕು ಬಂದ ಇಬ್ಬರಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಈಗಾಗಲೇ ದಕ್ಷಿಣ ಆಫ್ರಿಕಾದಿಂದ ವಿಮಾನದಲ್ಲಿ ಬಂದವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡುವಂತೆ ರಾಜ್ಯ ಸರ್ಕಾರ ಕೂಡ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.