ದಸರಾ ಹಿನ್ನೆಲೆ: ಅರಮನೆ ಆಡಳಿತ ಮಂಡಳಿಯ ಸಿಬ್ಬಂದಿಗೆ ಉಚಿತ ಆರೋಗ್ಯ ಶಿಬಿರ
ಮೈಸೂರು,ಸೆ. 24- ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದ ಪ್ರಯುಕ್ತ ಅರಮನೆ ಆಡಳಿತ ಮಂಡಳಿಯ ಸಿಬ್ಬಂದಿಗಳಿಗಾಗಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯು ಅರಮನೆಯಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಒಡೆಯರ್ ಅವರು ಸ್ವತಃ ಆರೋಗ್ಯ ತಪಾಸಣೆಗೆ ಒಳಗಾದರು.

ಅರಮನೆ ಮಂಡಳಿಯ ಅಧಿಕಾರಿಗಳು, ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳು, ಗಾರ್ಡನ್ ನಿರ್ವಹಣೆ ಸಿಬ್ಬಂದಿಗಳು ಸೇರಿ ಸುಮಾರು 200 ಜನ ತಪಾಸಣೆ ಮಾಡಿಸಿಕೊಂಡರು.
ಅರಮನೆ ಮಂಡಳಿ ಉಪ ನಿರ್ದೇಶಕ ಟಿ. ಎಸ್. ಸುಬ್ರಮಣ್ಯ, ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯ ಮುಖ್ಯಸ್ಥ ಎ.ಆರ್.ಮಂಜುನಾಥ್, ಡಾ.ಸಿ.ಬಿ.ಅವಿನಾಶ್, ಡಾ.ಪಿ. ಶ್ರೀನಿವಾಸನ್, ಡಾ.ರಾಮಕೃಷ್ಣ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.