ಸದಸ್ಯನ ಮೇಲೆ ಹಲ್ಲೆ’ ಪಿಡಿಓ ಅಮಾನತು!
ಗ್ರಾಮ ಪಂಚಾಯತಿ ಸದಸ್ಯನಿಗೆ ಪಿಡಿಓ ಯಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓರನ್ನ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ. ಎಚ್ ಡಿ ಕೋಟೆ ತಾಲೂಕು ಆಲನಹಳ್ಳಿ ಪಂಚಾಯತಿ ಯಲ್ಲಿ ನಿನ್ನೆ ಅಭಿವೃದ್ಧಿ ವಿಚಾರದಲ್ಲಿ ಪಿಡಿಓ ಹಾಗೂ ಗ್ರಾಮ ಪಂಚಾಯತಿ ಸದಸ್ಯ ನಡುವೆ ಕಿತ್ತಾಟ ನಡೆದಿತ್ತು. ಈ ಹಿನ್ನಲೆಯಲ್ಲಿ ವಿಡಿಯೋ ಕೂಡ ವೈರಲ್ ಆಗಿ ಆಲನಹಳ್ಳಿ ಗ್ರಾಮ ಪಂಚಾಯತಿ ಪಿಡಿಓ ಅಮಾನತ್ತು ಮಾಡಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಇಲಾಖೆ ವಿಚಾರಣೆ ಕಾಯ್ದಿರಿಸಿ ಪಿಡಿಓರನ್ನ ಅಮಾನತ್ತು ಅದೇಶ ಹೊರಡಿಸಿದ್ದಾರೆ.