ಪುನೀತ್ ರಾಜ್‍ಕುಮಾರ್ ನಿಧನದಿಂದ ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್‌ವುಡ್‌‌ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

– ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

About Author

Leave a Reply

Your email address will not be published. Required fields are marked *