ಆರೋಗ್ಯದಲ್ಲಿ ಏರುಪೇರು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಆಸ್ಪತ್ರೆಗೆ ದಾಖಲು!
1 min read
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಆರೋಗ್ಯದಲ್ಲಿ ಏರಿಳಿತ ಕಂಡಿದ್ದು ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾಏಕಿ ಕೆಳಗೆ ಕುಸಿದು ಬಿದ್ದ ಅವರನ್ನ ಆಪ್ತರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಸದ್ಯ ಅವರಿಗೆ ನುರಿತ ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ ಕೊಡಲಾಗ್ತಿದ್ದು ಅಭಿಮಾನಿಗಳಿಗೆ ಈ ಸುದ್ದಿ ಆತಂಕ ತಂದಿದೆ. ಆಸ್ಪತ್ರೆಗೆ ಇದೀಗಾ ಕುಟುಂಬಸ್ಥರು ಆಗಮಿಸುತ್ತಿದ್ದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಬೇಕಿದೆ. ಸದ್ಯ ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.