ಸಾರಾ ಮಹೇಶ್‌ರಿಂದ ಅಧಿಕಾರಿಗಳ ನೇತೃತ್ವದಲ್ಲಿ ಸಭೆ!
1 min readಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಿಗಮ/ನಿಯಮಿತ/ಆಯೋಗಗಳಲ್ಲಿ ಬಾಕಿ ಇರುವ ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧನಾ ವರದಿಗಳನ್ನು ವಿಧಾನಮಂಡಲಕ್ಕೆ ಸಲ್ಲಿಸದಿರುವ/ಸಲ್ಲಿಸಲು ಆಗಿರುವ ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾಜಿ ಸಚಿವ ಹಾಗೂ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾದ ಸಾರಾ ಮಹೇಶ್ ಚರ್ಚೆ ನಡೆಸಿದರು.

ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಸಚಿವರಾದ ಮಾನ್ಯ ಶ್ರೀ ಸಾ. ರಾ. ಮಹೇಶ್ ರವರು ಬೆಂಗಳೂರಿನಲ್ಲಿ ತಮ್ಮ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದರು. ಇದೇವೇಳೆ ಬಾಕಿ ಇರುವ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಇಲಾಖೆಗಳಿಗೆ ತಾಕೀತು ಮಾಡಿದರು.