ಸ್ನೇಕ್ಶ್ಯಾಮ್ಗೆ ಅಭಿನಂದನ ಸಮಾರಂಭ.!
1 min read
ಮೈಸೂರು : ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಹಾವುಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಹಾಗೂ 85,000ಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರುಗ ತಜ್ಞ ಸ್ನೇಕ್ ಶಾಮ್ ರವರಿಗೆ ಅಭಿನಂದನ ಸಮಾರಂಭವು ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಜುಲೈ 16ರಂದು ಮಧ್ಯಾಹ್ನ 4 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿಎಸ್ ಶ್ರೀವತ್ಸ, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಕಾಂಗ್ರೆಸ್ ಮುಖಂಡರಾದ ಎನ್ಎಂ ನವೀನ್ ಕುಮಾರ್, ಮಾಜಿನಗರ ಪಾಲಿಕಾ ಸದಸ್ಯರಾದ ಮಾ.ವಿ ರಾಮಪ್ರಸಾದ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಶಾಲೆಯ ಮುಖ್ಯ ಉಪಾಧ್ಯಾಯರಾದ ಸುಗುಣಾವತಿ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.