ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು!
ಮೈಸೂರು : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿ ವಿಷ ಸೇವೆಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ನಗರದ ಉದಯಗಿರಿಯ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿಗಳಾದ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳಾಗಿದ್ದು ಕಳೆದ ಕೆಲ ದಿನಗಳಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು ಎನ್ನಲಾಗಿದೆ.
ಸಾಲಕ್ಕೆ ಹೆದರಿದ ದಂಪತಿಗಳು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದದ್ದು, ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.