‘ಏಕ್ ಲವ್ ಯಾ’ ಸಿನಿಮಾದ ಟ್ರೇಲರ್ ರಿಲೀಸ್: ಫೆ.24ಕ್ಕೆ ತೆರೆಗೆ
1 min read
ಬೆಂಗಳೂರು,ಫೆ.11- ರಾಣಾ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ‘ಏಕ್ ಲವ್ ಯಾ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ.
ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಸಿನಿಮಾ ಬಿಡುಗಡೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಈ ನಡುವೆ ಇದೀಗ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ ಅದ್ಭುತವಾಗಿ ಮೂಡಿಬಂದಿದೆ.

ಫೆ.24 ರಂದು ಸಿನಿಮಾ ರಾಜ್ಯಾದ್ಯಂತ ತೆರೆಕಾಣಲಿದೆ. ಚಿತ್ರತಂಡ ಅಧಿಕೃತವಾಗಿ ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಈ ಬಗ್ಗೆ ನಿರ್ದೇಶಕ ಪ್ರೇಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಗ್ರೀಷ್ಮಾ ನಾಣಯ್ಯ ಸೇರಿದಂತೆ ಅನೇಕರು ಅಭಿನಯಿಸಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಮಾಡಿದ್ದು, ರಕ್ಷಿತಾಸ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ನಲ್ಲಿ ಸಿನಿಮಾ ನಿರ್ಮಿಸಲಾಗಿದೆ.
ಸಿನಿಮಾ ಜ.21ಕ್ಕೆ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೊರೊನಾ ಮೂರನೇ ಅಲೆಯ ಭೀತಿ ಮತ್ತು ಚಿತ್ರಮಂದಿರಗಳಲ್ಲಿ ಶೇ.50 ಪ್ರವೇಶಾತಿ ಇದ್ದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಫೆ.24 ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.