ಉಕ್ರೇನ್‌ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು!

1 min read

ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿಯನ್ನ ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ್ ಎಂದು ಗುರ್ತಿಸಲಾಗಿದೆ. ಮೃತ ನವೀನ್ ಅವರ ತಂದೆ ಶೇಖರಗೌಡರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಂತ್ವನದ ಮಾತುಗಳಾಡಿದ್ದಾರೆ. ದೂರವಾಣಿ ಕರೆ ಮಾಡಿ ಮಾತನಾಡಿದ ಸಿಎಂ ಸಾವನ್ನಪ್ಪಿದ ನವೀನ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದು ನಿಜಕ್ಕೂ ದೊಡ್ಡ ದುರಂತ. ದೇವರು ನವೀನ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ನೀವು ಧೈರ್ಯದಿಂದಿರಿ ಎಂದರು.

ಇದೇವೇಳೆ, ನವೀನ್ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಿಎಂ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಗನ ಬಗ್ಗೆ ದುಃಖದಿಂದ ಮಾತನಾಡಿದ ಶೇಖರಗೌಡ ಅವರು ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿ ದುಖತಪ್ಥರಾದರು.

About Author

Leave a Reply

Your email address will not be published. Required fields are marked *